ದಾವಣಗೆರೆ: ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಹೊರಟಿದ್ದ ಮಾದಿಗ ದಂಡೋರ ಸಮಿತಿ ಸದಸ್ಯರ ಬಸ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ಚಾಲಕ ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ನಡೆದಿದೆ. ದಾವಣಗೆರೆ ನಗರದ ಹೊರವಲಯದ ಜಿಲ್ಲಾ ಪಂಚಾಯಿತ್ ಎದುರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ.
ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕ್ಕಬಳ್ಳಾಪುರ, ಚಿಂತಾಮಣಿ ಸೇರಿದಂತೆ ವಿವಿಧ ಕಡೆಗಳಿಂದ ಮೂರು ಬಸ್ಗಳಲ್ಲಿ ಮಾದಿಗ ದಂಡೋರ ಸಮಿತಿ ಸದಸ್ಯರು ಬೆಳಗಾವಿ ಅಧಿವೇಶನಕ್ಕೆ ಹೊರಟಿದ್ದರು. ಮೂರು ಬಸ್ಸುಗಳಲ್ಲಿ ಒಂದು ಬಸ್ಸಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗದ ವರದಿ ಜಾರಿಗೆ ನಿರ್ಧಾರ ತೆಗೆದುಕೊಳ್ಳುವಂತೆ ಆಗ್ರಹಿಸಲು ಬೆಳಗಾವಿಗೆ ತೆರಳುತ್ತಿದ್ದ ಮಾದಿಗ ದಂಡೋರ ಸಮಿತಿ ಸದಸ್ಯರ ಬಸ್ಗೆ ಅಪಘಾತವಾಗಿದೆ. ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.