ದಾವಣಗೆರೆ: ಜಾರ್ಖಂಡ್ ನ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಮನೆಯಲ್ಲಿ ಕೋಟ್ಯಂತರ ರೂ. ಹಣ ಪತ್ತೆ ಪ್ರಕರಣಕ್ಕೆ ಸಂಭಂಧಿ ಸಿದಂತೆ ಧೀರಜ್ ಸಾಹು ವಿರುದ್ಧ ದಾವಣಗೆರೆಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದರು.
ದಾವಣಗೆರೆ ಬಿಜೆಪಿ ಕಚೇರಿಯಿಂದ ರೈಲ್ವೆ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರೈಲ್ವೆ ನಿಲ್ದಾಣದ ಮುಂದೆ ಧೀರಹ್ ಸಾಹು ವಿರುದ್ಧ ಘೋಷಣೆ ಕೂಗಿದರು. ಇನ್ನೂ ಧೀರಜ್ ಸಾಹು ವಿರುದ್ಧ ಸೂಕ್ತ ಕ್ರಮಕ್ಕೆ ದಾವಣಗೆರೆ ಜಿಲ್ಲಾ ಬಿಜೆಪಿ ಆಗ್ರಹಿಸಿತು.