ಬೆಂಗಳೂರು: ಬಿಜೆಪಿ ಮುಖಂಡ ಪೃಥ್ವಿಸಿಂಗ್ ದೂರನ್ನು ತಿರುಚುವ ಪ್ರಯತ್ನ ಪೊಲೀಸ್ ಮಾಡಿದ್ದಾರೆ. ನಾವು ಕೊಟ್ಟ ದೂರನ್ನು ತಮಗೆಷ್ಟು ಬೇಕು ಅಷ್ಟು ತಗೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಏನ್ ಬೇಕಿದೆ ಅಷ್ಟು ಮಾತ್ರ ಗೃಹ ಸಚಿವರು ಓದಿದ್ದಾರೆ. ಈ ವಿಚಾರ ಮುಂದಿಟ್ಟುಕೊಂಡು ಹೋರಾಟ ಮಾಡುತ್ತೇವೆ ಎಂದರು.
ಬಾಡಿಗೆ ಬೈಕ್’ನಲ್ಲಿ 330km ಪ್ರಯಾಣಿಸಿ ವಿಧಾನಸಭೆಗೆ ತೆರಳಿದ ಜನಪ್ರತಿನಿಧಿ!
ಅಶೋಕ ವಿಪಕ್ಷ ನಾಯಕ ಆಯ್ಕೆ ವಿರೋಧ ವಿಚಾರಕ್ಕೆ ಉತ್ತರಿಸಿದ ಅವರು, ರಾಜಕಾರಣದಲ್ಲಿ ಒಬ್ಬರು ನಾಯಕರ ಪರ, ವಿರೋಧ ಇರುತ್ತಾರೆ. ಒಬ್ಬರು ಆಯ್ಕೆಯಾದಾಗ ಹೀಗೆ ಹೇಳುತ್ತಾರೆ. ಹಾಗೇ ಕಾಂಗ್ರೆಸ್ನಲ್ಲೂ ಡಿಕೆಶಿ ಸಿದ್ದರಾಮಯ್ಯ, ಪರಮೇಶ್ವರ ಸಿದ್ದರಾಮಯ್ಯ ಪರ ವಿರೋಧ ಇದೆ. ಇವೆಲ್ಲವೂ ರಾಜಕಾರಣದಲ್ಲಿ ಕಾಮನ್ ಎಂದರು. ಸಭಾತ್ಯಾಗ ವಿಚಾರದಲ್ಲಿ ಹೊಂದಾಣಿಕೆ ಇಲ್ಲ ಎಂಬ ಪ್ರಶ್ನೆಗೆ ನಿನ್ನೆ ಯತ್ನಾಳ ಅವರು ನನ್ನ ಹತ್ತಿರ ಬಂದು ಹೇಳಿದರು.