ತುಮಕೂರು: ಕಾಂಗ್ರೆಸ್ ರಾಜ್ಯ ಸಭಾ ಸದಸ್ಯನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಹಿನ್ನೆಲೆ ತುಮಕೂರು ನಗರದ ಹಾಲ್ ವೃತ್ತದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯಸಭಾ ಸದಸ್ಯನ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ಧಿಕ್ಕಾರ ಎಂದು ಬರೆದಿರುವ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದು, ಜಾರ್ಖಂಡ್ ಸಂಸದ ಧೀರಜ್ ಸಾಹುಗೆ ಧಿಕ್ಕಾರ ಕೂಗಿದ ಕಾರ್ಯಕರ್ತರು.. ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ ಎಂದು ಕೂಗಿ ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕರವಿ ಶಂಕರ್ ನೇತೃತ್ವದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.