ಬೆಳಗಾವಿ:- ತಾಲ್ಲೂಕಿನ ವಂಟಮೂರಿ ಗ್ರಾಮದ ಬಸವೇಶ್ವರ ಗಲ್ಲಿಯಲ್ಲಿ ಮಹಿಳೆಯನ್ನು ಬೆತ್ತಲೆ ಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆಗೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಈಗಾಗಲೆ 7 ಜನರನ್ನು ಬಂಧಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಘಟನೆ ಹಿನ್ನಲೆ ನಾನು ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಆರೋಗ್ಯ ವಿಚಾರಣೆ ಮಾಡ್ತೀನಿ . ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಅಂತ ಹೇಳಿದರು.