ಸೂಪರ್ಸ್ಟಾರ್ ರಜನಿಕಾಂತ್ ಅವರಿಗೆ ಇಂದು 73ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಶುಭಾಚುಗಳ ಮಹಾಪೂರವೇ ಹರಿದು ಬರುತ್ತಿದೆ.
ರಜನಿಕಾಂತ್ ದಕ್ಷಿಣ ಭಾರತದ ಪ್ರಮುಖ ನಟರ ಸಾಲಿನಲ್ಲಿ ಮೊದಲಿಗರಾಗಿರು, ಅಭಿಮಾನಿಗಳ ಆರಾಧ್ಯ ದೈವ, ಇದಕ್ಕೆ ಉದಾಹರಣೆ 73ನೇ ವಯಸ್ಸಿನಲ್ಲಿಯೂ ಅವರು ನಾಯಕನಟನಾಗಿ ಸಿನಿರಸಿಕರನ್ನು ರಂಜಿಸುತ್ತಿದ್ದಾರೆ. ಈಗಲೂ ಅವರ ಸಿನಿಮಾಗಳಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ
ಕೇವಲ ತಮಿಳು ಮಾತ್ರವಲ್ಲದೆ, ಕನ್ನಡ, ತೆಲುಗು, ಹಿಂದಿ ಮೊದಲಾದ ಭಾಷೆಗಳಲ್ಲೂ ರಜನಿಕಾಂತ್ ಬಣ್ಣ ಹಚ್ಚಿದ್ದಾರೆ. ಅವರು ದಕ್ಷಿಣ ಭಾರತದ ಶ್ರೀಮಂತ ನಟ ಎನ್ನುವ ಖ್ಯಾತಿಗೂ ಪಾತ್ರರಾಗಿದ್ದಾರೆ. ಇವರ ಅಭಿಮಾನಿಗಳ ಬಳಗ ಕೇವಲ ದಕ್ಷಿಣ ಭಾರತದ ರಾಜ್ಯಗಳಿಗೆ ಮಾತ್ರ ಸೀಮಿತವಾಗಿರದೇ ದೇಶ ವಿದೇಶಗಳಲ್ಲಿಯೂ ಅಭಿಮಾನಿಗಳನ್ನು ಹೊಂದಿದ್ದಾರೆ. ಇದೀಗ 73ನೇ ವರ್ಷದ ಜನ್ಮದಿನದ ಆಚರಣೆಯಲ್ಲಿರುವ ಇವರಿಗೆ ಶುಭಾಷಯಗಳು ಎಲ್ಲೆಡೆಯಿಂದ ಹರಿದುಬರುತ್ತಿದೆ.