ನೀವು ಹೊಸ ಸಿಮ್ ಕಾರ್ಡ್ (Sim Card) ಖರೀದಿ ಮಾಡುತ್ತೀರಾ? ಹಾಗಾದ್ರೆ ಕೆಲ ಕಠಿಣ ನಿಯಮಗಳನ್ನು ಪಾಲಿಸಬೇಕು. ಗ್ರಾಹಕರು ಮಾತ್ರವಲ್ಲ ಸಿಮ್ ವಿತರಿಸುವ ಡೀಲರ್ಗಳು ಸಹ ಕಠಿಣ ನಿಯಮಗಳನ್ನು ಪಾಲಿಸಲೇಬೇಕು. ನಿಯಮ ಪಾಲಿಸದೇ ಉಲ್ಲಂಘನೆ ಮಾಡಿದರೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಗಂಭೀರ ಪ್ರಕರಣವಾದಲ್ಲಿ ಜೈಲು (Jail) ಶಿಕ್ಷೆಯನ್ನು ವಿಧಿಸಲಾಗುತ್ತದೆ.
ಹೊಸ ನಿಯಮಗಳು ಏನು?
ವ್ಯಾಪಾರಸ್ಥರು/ ಕಂಪನಿಗಳಿಗೆ ಮಾತ್ರ ಸಿಮ್ ಕಾರ್ಡ್ಗಳನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸಲು ಅನುಮತಿ ನೀಡಲಾಗಿದೆ. ಸಾಮಾನ್ಯ ಬಳಕೆದಾರರು ಒಂದು ಗುರುತಿನಿಂದ ಗರಿಷ್ಠ 9 ಸಿಮ್ಗಳನ್ನು ಮಾತ್ರ ಪಡೆಯಬಹುದು
ಸಿಮ್ ಕಾರ್ಡ್ ರದ್ದು/ ನಿಷ್ಕ್ರಿಯಗೊಳಿಸಿದ 90 ದಿನಗಳ ನಂತರ ಆ ಸಂಖ್ಯೆಯನ್ನು ಬೇರೆ ಗ್ರಾಹಕರಿಗೆ ನೀಡಲಾಗುತ್ತದೆ.
ಸಿಮ್ ಕಾರ್ಡ್ಗಳನ್ನು ಖರೀದಿಸುವ ಗ್ರಾಹಕರು ತಮ್ಮ ಆಧಾರ್ (Aadhar Card) ಮತ್ತು ಜನಸಂಖ್ಯಾ ಡೇಟಾವನ್ನು (Demographic Data Collection) ಸಲ್ಲಿಸಬೇಕಾಗುತ್ತದೆ.
ನೋಂದಾಯಿಸದ ಡೀಲರ್ಗಳ ಮೂಲಕ ಸಿಮ್ ಕಾರ್ಡ್ಗಳನ್ನು ಮಾರಾಟ ಮಾಡಿದರೆ ಹೊಸ ನಿಯಮಗಳ ಪ್ರಕಾರ ಟೆಲಿಕಾಂ ಆಪರೇಟರ್ಗಳಿಗೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.
ಎಲ್ಲಾ ಸಿಮ್ ಕಾರ್ಡ್ ಡೀಲರ್ಗಳು ಕಡ್ಡಾಯವಾಗಿ ನವೆಂಬರ್ ಅಂತ್ಯದೊಳಗೆ ದಾಖಲೆಗಳನ್ನು ಸಲ್ಲಿಸಬೇಕು ಮತ್ತು ನೋಂದಾಯಿಸಿಕೊಳ್ಳಬೇಕು. ಸಿಮ್ ಕಾರ್ಡ್ ಡೀಲರ್ಗಳು ಅಥವಾ ಚಿಲ್ಲರೆ ವ್ಯಾಪಾರಿಯು ನೋಂದಣಿಗಾಗಿ ಕಾರ್ಪೊರೇಟ್ ಗುರುತಿನ ಸಂಖ್ಯೆ (CIN), ಸೀಮಿತ ಹೊಣೆಗಾರಿಕೆ ಪಾಲುದಾರಿಕೆ ಗುರುತಿನ ಸಂಖ್ಯೆ (LLPIN) ಅಥವಾ ವ್ಯಾಪಾರ ಪರವಾನಗಿ, ಆಧಾರ್ ಅಥವಾ ಪಾಸ್ಪೋರ್ಟ್, ಪಾನ್, ಸರಕು ಮತ್ತು ಸೇವಾ ತೆರಿಗೆ ನೋಂದಣಿ ಪ್ರಮಾಣಪತ್ರ ಇತ್ಯಾದಿಗಳನ್ನು ಒದಗಿಸಬೇಕಾಗುತ್ತದೆ.
ಸಿಮ್ ಡೀಲರ್ಗಳು ನಕಲಿ ದಾಖಲೆಗಳನ್ನು ಸಲ್ಲಿಸಿದರೆ, ಟೆಲಿಕಾಂ ಆಪರೇಟರ್ಗಳು ಅವರ ಐಡಿಯನ್ನು ನಿರ್ಬಂಧಿಸಬೇಕು. ಅಷ್ಟೇ ಅಲ್ಲದೇ ಸಿಮ್ ಡೀಲರ್ನಿಂದ ಯಾರಿಗೆಲ್ಲ ಸಿಮ್ ಕಾರ್ಡ್ ವಿತರಣೆಯಾಗಿದೆಯೋ ಆ ಎಲ್ಲಾ ಗ್ರಾಹಕರು ಸಿಮ್ ಪಡೆಯಲು ನೀಡಿದ ದಾಖಲೆಗಳನ್ನು ಮರು ಪರಿಶೀಲಿಸಬೇಕಾಗುತ್ತದೆ