ಧಾರವಾಡ: ಧಾರವಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಅಂಜುಮನ್ ಸಂಸ್ಥೆಯ ಪದಾಧಿಕಾರಿಗಳ ನೇತೃತ್ವದಲ್ಲಿ ನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.
ತನ್ವೀರ್ ಪೀರಾ ಬಗ್ಗೆ ಭಯೋತ್ಪಾದನಕರ ಜೊತೆ ನಂಟಿದೆ ಎಂದು ಹೇಳಿಕೆ ಕೊಟ್ಟಿದ್ದ ಶಾಸಕ ಯತ್ನಾಳ್, ಇದರ ಬೆನ್ನಲ್ಲೇ ಸ್ವಾರ್ಥ ರಾಜಕಾರಣಕ್ಕಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ ಸರಿಯಲ್ಲ, ಮುಸ್ಲಿಂ ಸಮುದಾಯಕ್ಕೆ ಕ್ಷಮೆ ಕೇಳಿ ಉತ್ತರ ಕರ್ನಾಟಕ ಅಭಿವೃದ್ಧಿಗೆ ಲೈ ಜೋಡಿಸಲು ಒತ್ತಾಯ ಮಾಡಿದ್ದಾರೆ.