ಬೆಂಗಳೂರು: ಸೋಮವಾರ ರಾತ್ರಿ 11.30ರ ಸುಮಾರಿಗೆ ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆಯೂ ಬಂದಿದ್ದು, ಪೊಲೀಸರು ತಕ್ಷಣ ರಾಜಭವನದಲ್ಲಿ ಪರಿಶೀಲನೆ ನಡೆಸಿದ್ದಾರೆ, ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಗೊತ್ತಾಗಿದೆ. ಬಾಂಬ್ ಬೆದರಿಕೆ ಕರೆಯ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.
ಈ ಬಗ್ಗೆ ನಗರ ಪೊಲೀಸ್ ಕಮೀಷನರ್ ದಯಾನಂದ್ ಸುದ್ದಿಗೋಷ್ಠಿ ನಡೆಸಿ ನೆನ್ನೆ ರಾತ್ರಿ ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಫೋನ್ ಕರೆ ಬಂದಿತ್ತು. ನಮ್ಮ ಪೊಲೀಸರು ರಾಜಭವನದಲ್ಲಿ ಸಂಪೂರ್ಣವಾಗಿ ಪರಿಶೀಲನೆ ಮಾಡಿದ್ದಾರೆ.ಅಲ್ಲಿ ಆ ರೀತಿಯ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಕರೆಯಾಗಿದೆ ಎಂದಿದ್ದಾರೆ.
ಹುಸಿ ಬಾಂಬ್ ಬೆದರಿಕೆ ಕರೆ ಮಾಡಿರೋ ವ್ಯಕ್ತಿಯ ಶೋಧ ನೆಡೆಯುತ್ತಿದೆ. ಆರೋಪಿಯನ್ನು ಆದಷ್ಟು ಬೇಗ ಅರೆಸ್ಟ್ ಮಾಡ್ತೀವಿ. ಎಂದು ನಗರ ಪೊಲೀಸ್ ಕಮೀಷನರ್ ಬಿ ದಯಾನಂದ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.