ಬೆಂಗಳೂರು:- ಪ್ರಯಾಣಿಕರು ಟಿಕೆಟ್ ರಹಿತ ಪ್ರಯಾಣ ಮಾಡುವುದನ್ನು ತಡೆಗಟ್ಟಲು ಹಾಗೂ ಅಂತಹ ಪ್ರಕರಣಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲು ಬಿಎಂಟಿಸಿ ಬಸ್ಗಳನ್ನು ಸಿಬ್ಬಂದಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ.
ನವೆಂಬರ್ ತಿಂಗಳಲ್ಲಿ ವಿವಿಧ ನಿಯಮಗಳನ್ನು ಉಲ್ಲಂಘಿಸಿದ 3,767 ಪ್ರಯಾಣಿಕರ ವಿರುದ್ಧ ಬಿಎಂಟಿಸಿ ಕ್ರಮ ಕೈಗೊಂಡಿದೆ. ಒಟ್ಟು 7 ಲಕ್ಷ ರೂಪಾಯಿಗಳನ್ನು ದಂಡದ ಮೊತ್ತವನ್ನು ಸಂಗ್ರಹಿಸಲಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತಿಳಿಸಿದೆ.
ನವೆಂಬರ್ ತಿಂಗಳಲ್ಲಿ 16,421 ಟ್ರಿಪ್ಗಳನ್ನು ಸಿಬ್ಬಂದಿ ಪರಿಶೀಲಿಸಿದ್ದಾರೆ. ಈ ವೇಳೆ 3,329 ಪ್ರಯಾಣಿಕರು ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದದ್ದನ್ನು ಪತ್ತೆಹಚ್ಚಿ, ಒಟ್ಟು 6,68,610 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಅಲ್ಲದೆ, ಕರ್ತವ್ಯಲೋಪ ಹಿನ್ನೆಲೆ ಕಂಡಕ್ಟರ್ಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತುಕೊಂಡು ಪ್ರಯಾಣ ಮಾಡುತ್ತಿದ್ದ 438 ಪುರುಷ ಪ್ರಯಾಣಿಕರಿಗೆ ಬಿಎಂಟಿಸಿಯ ತಪಾಸಣಾ ಸಿಬ್ಬಂದಿ ದಂಡ ವಿಧಿಸಿದ್ದಾರೆ ಮತ್ತು ಕರ್ನಾಟಕ ಮೋಟಾರು ವಾಹನಗಳ ನಿಯಮಗಳಿಗೆ ಅನುಗುಣವಾಗಿ 43,800 ರೂಪಾಯಿ ದಂಡವನ್ನು ವಸೂಲಿ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.