ಬೆಳಗಾವಿ:- ಬಾಯಿ ಸರಿ ಇದ್ದಿದ್ದರೆ ನಾನು ಸಿಎಂ ಆಗ್ತಿದ್ನಂತೆ ಎಂದು ಯತ್ನಾಳ್ ಹೇಳಿದ್ದಾರೆ.
ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿರುವ ಯತ್ನಾಳ್ ಎಚ್.ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ವಿಜಯಪುರಕ್ಕೆ 105 ಕೋಟಿ ರೂ. ನೀಡಿದ್ದರು. ದುರ್ದೈವ ಅಂದರೆ ಬಿಜೆಪಿ ಅಧಿಕಾರಕ್ಕೆ ಬಂದಾಗ ಅದನ್ನು ರದ್ದು ಮಾಡಿತ್ತು. ಯತ್ನಾಳ್ ಅವರೇ ನಿಮ್ಮ ಬಾಯಿ ಸರಿ ಇದ್ದಿದ್ದರೆ ಸಿಎಂ ಆಗುವ ಯೋಗ್ಯತೆ ಇತ್ತು ಅಂತಾ ಕೆಲವರು ಹೇಳಿದ್ದರು. ನಾನ್ಯಾರಿಗೂ ಹೆದರುವುದಿಲ್ಲ ಹೇಲಬೇಕಾದ್ದನ್ನು ನೇರವಾಗಿ ಹೇಳ್ತೇನೆ ಎಂದಿದ್ದಾರೆ.
ಪಿಎಸಿಗೆ ಸಿಸಿ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ ಸಮಾಧಾನ ಮಾಡಲು ಯತ್ನಿಸುತ್ತಿದ್ದಾರೆ. ಪಂಚಮಸಾಲಿ ಸಮುದಾಯವನ್ನು ಸಮಾಧಾನ ಮಾಡಲು ಹೊರಟಿದ್ದಾರೆ. ಇದಕ್ಕೆ ಮೇಲಿಂದ ಅನುಮತಿ ಪಡೆದಿದ್ದಾರೋ ಇಲ್ಲವೋ ಗೊತ್ತಿಲ್ಲ. ಬೊಮ್ಮಾಯಿ, ಭೈರತಿ ಬಸವರಾಜ್ ಅನುದಾನ ನೀಡಿ ನೆರವಾದರು ಅಧಿಕಾರದಲ್ಲಿದ್ದಾಗ ಸಹಾಯ ಮಾಡದವರು ಈಗ ಮಾಜಿಗಳಾಗಿದ್ದಾರೆ. ನಾನು ಟಾರ್ಗೆಟ್ ಮಾಡಿದರೆ ಅವರು ಮಾಜಿಯಾಗುವವರೆಗೂ ಬಿಡಲ್ಲ ನಾನು ಒಂಟಿ ಸಲಗ ಇದ್ದೇನೆ. ಒಂಟಿ ಸಲಗ ಆಗಿಯೇ ಹೊಡೆಯುತ್ತೇನೆ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.