ಉಡುಪಿ: ಸಮಾಜ ಸೇವೆ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಕಾಪು (Kapu) ತಾಲೂಕಿನಾದ್ಯಂತ ಭಾರೀ ಹೆಸರು ಗಳಿಸಿದ್ದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂದರಾ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಾಪುವಿನಲ್ಲಿರುವ ಅವರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ್ದು, ದಂಪತಿ ಸಮಾಜ ಸೇವೆ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಬಹಳ ಸಕ್ರೀಯರಾಗಿದ್ದರು. ಲೀಲಾಧರ ಶೆಟ್ಟಿಯವರು ರಂಗಕರ್ಮಿಯಾಗಿದ್ದು, ರಂಗತರಂಗ ನಾಟಕ ತಂಡದವನ್ನು ಬೆಳೆಸಿದ್ದರು.
Crispy Nippattu Recipe: ಈ ಚಳಿಗೆ ಬಿಸಿ ಬಿಸಿ ಗರಿ ಗರಿಯಾದ ನಿಪ್ಪಟ್ಟು ಮಾಡಬಹುದು ನೋಡಿ..!
ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸಹ ಸ್ಪರ್ಧಿಸಿದ್ದರು. ದಂಪತಿ ಕೌಟುಂಬಿಕ ಕಾರಣಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕಾಪು ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.