ಬೆಳಗಾವಿ:- ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು, ಕಾಂಗ್ರೆಸ್ ದುರಾಡಳಿತಕ್ಕೆ ಎಷ್ಟು ಹಣ ಬಂದರೂ ಸಾಕಾಗಲ್ಲ ಎಂದು ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ದುರಾಡಳಿತಕ್ಕೆಎಷ್ಟು ಹಣ ಬಂದರೂ ಸಾಕಾಗಲ್ಲ, ಈ ಮೂಲಕ ಜನರಿಗೆ ಕಿರುಕುಳ ನೀಡಿದರೆ, ಅಧಿವೇಶನ ಮುಗಿದ ಮೇಲೆ ಅಧಿಕಾರ ಬಿಟ್ಟು ತೊಲಗಿ ಎಂದು ರಾಜ್ಯಾದ್ಯಂತ ಪ್ರವಾಸ ಮಾಡಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇನೆ. ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ತಕ್ಷಣ ವಾಪಸ್ ಪಡೆಯಬೇಕು ಎಂದರು.