ಬೆಂಗಳೂರು: ಸಂಸತ್ (Parliament) ಭವನದಲ್ಲಿ ಸ್ಮೋಕ್ ದಾಳಿ (Smoke Bomb) ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ಸಂಸದ ಪ್ರತಾಪ್ ಸಿಂಹ (Prathap Simha) ವಿರುದ್ಧ ಕಾಂಗ್ರೆಸ್ (Congress) ಕಾರ್ಯಕರ್ತರು (Activist) ಪ್ರತಿಭಟನೆ (Protest) ನಡೆಸಿದ್ದಾರೆ.
ರೇಸ್ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಪ್ರತಾಪ್ ಸಿಂಹ ಹಾಗೂ ಬಿಜೆಪಿ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ
ಬಂಧನಕ್ಕೆ ಆಗ್ರಹಿಸಿ ಕಾರ್ಯಕರ್ತರು ಪ್ರತಾಪ್ ಸಿಂಹ ಫೋಟೋಗೆ ಬೆಂಕಿ ಹಚ್ಚಿದ್ದು, ಅವರ ಪ್ಲೇ ಕಾರ್ಡ್ಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಕೂಡಲೇ ಸಂಸದ ಪ್ರತಾಪ್ ಸಿಂಹರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.