ದೇವನಹಳ್ಳಿ:- ಹೊಸಕೋಟೆಯಲ್ಲಿ ಹೆಣ್ಣು ಭ್ರೂಣ ಹತ್ಯ ಕೇಸ್ ಪತ್ತೆ ಹಿನ್ನಲೆ ಬೆಂಗಳೂರು ಗ್ರಾ. ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆ ಅಧಿಕಾರಿಗಳು ಹೈ ಅಲರ್ಟ್ ಘೋಷಿಸಿದ್ದಾರೆ. ದೊಡ್ಡಬಳ್ಳಾಪುರ ಖಾಸಗಿ ಆಸ್ಪತ್ರೆಗಳನ್ನು ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ.
ದೊಡ್ಡಬಳ್ಳಾಪುರದ ಸತ್ಯ ಸಾಯಿ ಆಸ್ಪತ್ರೆಯ ಲ್ಯಾಬ್ ಸೀಜ್ ಮಾಡಲಾಗಿದ್ದು, ಆಸ್ಪತ್ರೆಯಲ್ಲಿ ಲ್ಯಾಬ್ ಸರಿಯಾಗಿ ನಿರ್ವಹಿಸದ ಕಾರಣ ಸೀಜ್ ಮಾಡಲಾಗಿದೆ. ಜಿಲ್ಲಾ ಆರೋಗ್ಯ ಅಧಿಕಾರಿ ಸುನೀಲ್ ಕುಮಾರ್ ತಾಲೂಕು ವೈದ್ಯಾಧಿಕಾರಿ ಶಾರದ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ದಾಳಿ ವೇಳೆ ಲ್ಯಾಬ್ ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ಕಂಡುಬಂದಿದೆ. ಕೂಡಲೇ ಆರೋಗ್ಯ ಇಲಾಖೆ ಲ್ಯಾಬ್ ನ ಸೀಜ್ ಮಾಡಿದ್ದಾರೆ. ಅಲ್ಲದೆ ಲ್ಯಾಬ್ ನಡೆಸಲು ಸರಿಯಾದ ದಾಖಲೆಗಳೂ ಇರಲಿಲ್ಲ. ದಾಖಲೆ ಇಲ್ಲದೆ ಅನಧಿಕೃತವಾಗಿ ಆಸ್ಪತ್ರೆ ಸಿಬ್ಬಂದಿ ಲ್ಯಾಬ್ ನಡೆಸುತ್ತಿದ್ದರು ಎನ್ನಲಾಗಿದೆ.