ಬೆಳಗಾವಿ:- ಕಾಂಗ್ರೆಸ್ ಸಿಎಲ್ಪಿ ಸಭೆಗೆ ನಾನು ಹೋಗಿಲ್ಲ, ಸುಳ್ಳು ಸುದ್ದಿ ಬೇಡ ಎಂದು ಮಾಜಿ ಸಚಿವ ST ಸೋಮಶೇಖರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸ್ಪಷ್ಟೀಕರಣ ನೀಡಿರುವ ಎಸ್.ಟಿ. ಸೋಮಶೇಖರ್, ಕಾಂಗ್ರೆಸ್ ಸಿಎಲ್ಪಿ ಸಭೆಗೆ ನಾನು ಹೋಗಿಲ್ಲ. ಬುಧವಾರ ರಾತ್ರಿ ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಹ ಔತಣಕೂಟವನ್ನು ಇಟ್ಟುಕೊಂಡಿದ್ದರು. ಅವರ ಆಯೋಜಿಸಿದ್ದ ಔತಣಕೂಟದಲ್ಲಿ ನಾನು ಭಾಗಿಯಾಗಿ ಊಟ ಮಾಡಿದ್ದೇನೆ ಎಂದು ಹೇಳಿದರು.
ಅಲ್ಲದೆ, ಇತ್ತ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಹ ನನಗೆ ಊಟಕ್ಕೆ ಆಹ್ವಾನ ಕೊಟ್ಟಿದ್ದರು. ಹೀಗಾಗಿ 11 ಗಂಟೆ ವೇಳೆಗೆ ನಾನು ಡಿ.ಕೆ. ಶಿವಕುಮಾರ್ ಕರೆದಿದ್ದ ಔತಣಕೂಟದಲ್ಲಿ ಭಾಗಿಯಾದೆ. ಅಲ್ಲಿಗೆ ಹೋಗಿ ಅವರಿಗೆ ವಿಶ್ ಮಾಡಿ ಬಂದೆ ಎಂದು ಎಸ್.ಟಿ. ಸೋಮಶೇಖರ್ ಪ್ರತಿಕ್ರಿಯೆ ನೀಡಿದರು.
ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡುವ ವಿಚಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಎಸ್.ಟಿ. ಸೋಮಶೇಖರ್, ಯಾವ ಲೋಕಸಭೆ ಚುನಾವಣೆಗೂ ಸ್ಪರ್ಧೆ ಮಾಡಲ್ಲ. ಮೈಸೂರಿನಲ್ಲಿ ಸ್ಪರ್ಧೆ ಮಾಡಲು ಒತ್ತಡ ಇದೆ. 2028ಕ್ಕೆ ಮತ್ತೆ ಶಾಸಕನಾಗಿ ಆಯ್ಕೆ ಆಗಬೇಕು ಅಂತಿದ್ದೇನೆ ಎಂದು ಹೇಳಿದರು.