ಬೆಳಗಾವಿ: ಮಹಿಳೆಯೊಬ್ಬರನ್ನು ಬೆತ್ತಲುಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ರಾಜ್ಯಾಧ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಕಳೆದ ವಾರ ಬೆಳಗಾವಿ ಗ್ರಾಮಾಂತರ ವಂಟಮೂರಿ ವಿಷಯ ದೇಶಾದ್ಯಂತ ಚರ್ಚೆ ಆಗಿದೆ. ಒಬ್ಬ ಮಹಿಳೆಯನ್ನ ಬೆತ್ತಲೆ ಮಾಡಿ ಮೆರವಣಿಗೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಲಾಗಿದೆ.
Nail Cutting At Night: ರಾತ್ರಿ ಯಾಕೆ ಉಗುರು ಕತ್ತರಿಸಬಾರದು ಗೊತ್ತಾ..? ಇಲ್ಲಿದೆ ನೋಡಿ ಕಾರಣ
ಬೆಳಗಾವಿ ಅಧಿವೇಶನ ನಡೆಯುವ ಸಂದರ್ಭದಲ್ಲೇ ಘಟನೆ ನಡೆದಿದೆ ಎಂದರು ನಾನು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಬಂದಿದ್ದೇನೆ. ಗೃಹ ಮಂತ್ರಿಗಳು ಭೇಟಿ ನೀಡಿದ್ದಾರೆ. ಆದರೆ ಇಡೀ ರಾಜ್ಯದ ಜನ ತಲೆ ತಗ್ಗಿಸುವ ಘಟನೆ ಇದಾಗಿದೆ. ಈ ಸಂಬಂಧ ಆರು ಮಂದಿಯ ಬಂಧನವೂ ಆಗಿದೆ. ಆದರೆ ಸರ್ಕಾರ ಇದನ್ನು ಲಘುವಾಗಿ ಪರಿಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.