ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumaraswamy) ಅವರು ಸಿಂಗಾಪುರಕ್ಕೆ (Singapore) ಹಾರಿದ್ದಾರೆ.
ಶನಿವಾರ ಕುಮಾರಸ್ವಾಮಿ ಅವರ ಹುಟ್ಟುಹಬ್ಬವಿದ್ದು, ಜನ್ಮದಿನದ (Birthday) ಆಚರಣೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಟುಂಬ ಮತ್ತು ಕೆಲ ಆಪ್ತರ ಜೊತೆ ಕುಮಾರಸ್ವಾಮಿ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.
https://ainlivenews.com/govt-monitoring-right-wing-activists-to-prevent-hate-speech-cases-g-parameshwar/
ಅಭಿಮಾನಿಗಳಲ್ಲಿ ಮನವಿ:
ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ ನಾಳೆ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ. ಕಾರ್ಯಕರ್ತರಾದಿಯಾಗಿ ನನ್ನ ಮೇಲೆ ಪ್ರೀತಿ, ವಾತ್ಸಲ್ಯ ಇರಿಸಿರುವ ಪ್ರತಿಯೊಬ್ಬರೂ ನನ್ನ ವೈಯಕ್ತಿಕ ಭೇಟಿಗೆ ಪ್ರಯತ್ನಿಸದೇ ತಾವು ಇದ್ದಲ್ಲಿಂದಲೇ ಶುಭ ಕೋರಬೇಕಾಗಿ ನಿಮ್ಮೆಲ್ಲರಲ್ಲೂ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಹೆಚ್ಡಿಕೆ ಪೋಸ್ಟ್ ಮಾಡಿದ್ದಾರೆ.