ಧಾರವಾಡ :- 2024 ರ ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿಗಳ ಜೊತೆ ಧಾರವಾಡದ ಮಯೂರ ಹೊಟೇಲ್ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕೆ ಲಕ್ಷ್ಮೀ ಹೆಬ್ಬಾಳಕರ ಸಭೆ ನಡೆಸಿದರು.
ಸಭೆ ಆಗುವುದಕ್ಕೂ ಮುನ್ನ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಸಭೆ ಈಗಾಗಲೇ ಆಗಬೇಕಾಗಿತ್ತು. ಗೃಹ ಲಕ್ಷ್ಮಿ ಯೋಜನೆಯಲ್ಲಿ ನಾನು ಬ್ಯುಸಿಯಾಗಿದ್ದೆ ನಾನು ಉಡುಪಿಯ ಉಸ್ತುವಾರಿಯೂ ಹೌದು. ಬೆಳಗಾವಿಗೆ ಹೋಗಲು ವಾರಕ್ಕೆ ಎರಡು ದಿನ ಸಿಗ್ತಾ ಇತ್ತು. ಹೀಗಾಗಿ ಧಾರವಾಡಕ್ಕೆ ಬರೋದಕ್ಕೆ ಸ್ವಲ್ಪ ತಡ ಆಗಿದೆ . ಡಿ. 30ರೊಳಗೆ ಆಕಾಂಕ್ಷಿಗಳ ಪಟ್ಟಿ ಕೊಡಬೇಕಿದೆ. ಈ ಸಂಬಂಧ ನನಗೆಸೂಚನೆ ಕೊಟ್ಟಿದ್ದಾರೆ. ಈ ಭಾಗದ ಶಾಸಕರು, ಸಚಿವರೊಂದಿಗೆ ಮಾತನಾಡಿಕೊಳ್ಳಬೇಕಿದೆ. ಆಕಾಂಕ್ಷಿಗಳೆಲ್ಲ ಖುದ್ದಾಗಿ ಭೇಟಿಯಾಗಿ ಅರ್ಜಿ ಕೊಡಬೇಕು . ಅಲ್ಪಸಂಖ್ಯಾತರದ್ದು ಇಡೀ ರಾಜ್ಯದಲ್ಲಿ 3 ಕ್ಷೇತ್ರದ ಬೇಡಿಕೆ ಇದೆ. ಎಲ್ಲವನ್ನೂ ಪಕ್ಷದ ಅಧ್ಯಕ್ಷರಿಗೆ ವರದಿ ಮಾಡುತ್ತೇನೆ. ಧಾರವಾಡದಿಂದ ಅಲ್ಪಸಂಖ್ಯಾತರು ಯಾರು ಅರ್ಜಿ ಸಲ್ಲಿಸಿಲ್ಲ. ನಾನು ಈಗ ಎಲ್ಲ ಮುಖಂಡರೊಂದಿಗೆ ಸಭೆ ಮಾಡ್ತೀನಿ ಎಂದರು.