ಬೆಂಗಳೂರು:- ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ಮಂಜುನಾಥ್ ಬಂಧಿತ ಆರೋಪಿ. ಹತ್ಯೆ, ಕೊಲೆಯತ್ನ, ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಂಜುನಾಥ್ ಕಳೆದ ಆರೇಳು ತಿಂಗಳುಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಕೊನೆಗೆ ಬೆಂಗಳೂರು, ಮಾಗಡಿ, ಕುಣಿಗಲ್ ಮಾರ್ಗದ ಬಸ್ಗಳಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.