ಧಾರವಾಡ: ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ಮಹಿಳೆ ಬೆತ್ತಲೆ ಮಾಡಿ ಹಲ್ಲೆ ಮಾಡಿದ ಪ್ರಕರಣ ಖಂಡಿಸಿ ಧಾರವಾಡದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬೀದಿಗಿಳಿದು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು.
ಧಾರವಾಡ ಜಿಲ್ಲೆಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಹು-ಧಾ ಮಾಹಾನಗರ ಜಿಲ್ಲಾಧ್ಯಕ್ಷ ಸಂಜಯ ಹಾಗೂ ಮಾಜಿ ಶಾಸಕಿ ಸೀಮಾ ನೇತೃತ್ವದಲ್ಲಿ ಪ್ರತಿಭಟನೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆ ಬೆತ್ತಲೆ ಮಾಡಿ ಹಲ್ಲೆ ಮಾಡಿರುವ ಘಟನೆ ಖಂಡನೀಯವಾಗಿದೆ ಸರ್ಕಾರ ಗ್ಯಾರಂಟಿ ಹೆಸರು ಹೇಳಿಕೊಂಡು ದಿನಗಳ ದೂಡುತ್ತಿದೆ ಹಲವಾರು ಮಹಿಳೆಯರು ಕಾಂಗ್ರೆಸ್ ಗ್ಯಾರಂಟಿ ಮುಟ್ಟಿಲ್ಲವೆಂದು ಹೇಳುತ್ತಿದ್ದಾರೆ
ಈ ರಾಜ್ಯ ಸರ್ಕಾರಕ್ಕೆ ಅಧಿಕಾರವೇ ಮುಖ್ಯವಾಗಿದೆ ದಿನ ದಲಿತರ ಹಾಗೂ ಸಾಮನ್ಯ ಜನರ ಸುರಕ್ಷತೆ ಕಾಂಗ್ರೆಸ್ ಸರ್ಕಾರಕ್ಕೆ ಮುಖ್ಯವಾಗಿಲ್ಲ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ವಂಟಮೂರಿ ಘಟನೆಯ ಬಳಿಕ ಹೈ ಕೋರ್ಟ ಪೀಠವು ಕೂಡಾ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಧಾನ ಹೊರಹಾಕಿದೆ ಘಟನೆಯ ಕುರಿತು ಹೈಕೋರ್ಟ ರಿಪೋರ್ಟ್ ಕೇಳಿದೆ ಈ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಿ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.