ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಪೊಲೀಸ್ ಠಾಣೆ (Police Station) ಒಂದರ ಮೇಲೆ ಆತ್ಮಹತ್ಯಾ ಬಾಂಬರ್ಗಳು ನಡೆಸಿದ ದಾಳಿಯಲ್ಲಿ ಕನಿಷ್ಠ 23 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಈ ದಾಳಿ ನಡೆದಿದೆ. ಉಗ್ರರು ಸ್ಫೋಟಕಗಳನ್ನು ತುಂಬಿದ ವಾಹನವನ್ನು ಪೊಲೀಸ್ ಠಾಣೆಯ ಮುಖ್ಯ ಗೇಟ್ಗೆ ನುಗ್ಗಿಸಿದ್ದಾರೆ. ಬಳಿಕ ಗುಂಡು ಹಾರಿಸಲು ಪ್ರಾರಂಭಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರ ನಡುವೆ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ. ಪಾಕಿಸ್ತಾನಿ ಸೇನೆ ಹಾಗೂ ಪೊಲೀಸರನ್ನು ಗುರಿಯಾಗಿಟ್ಟುಕೊಂಡು ಉಗ್ರರು ಈ ದಾಳಿ (Terrorist Attack) ನಡೆಸಿದ್ದಾರೆ. ದೇಶದ ಭಯೋತ್ಪಾದಕ ಸಂಘಟನೆಗಳಲ್ಲಿ ಒಂದಾದ ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನವು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.