ಬೆಂಗಳೂರು:– ರಾಜ್ಯದಲ್ಲಿ ಮೂರು ದಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿಯಲ್ಲಿ ಡಿ.17ರಿಂದ ಡಿ.19ರವರೆಗೆ ಮಳೆ ಸುರಿಯಲಿದೆ.
ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಡಿ.18ರಂದು ಸಾಧಾರಣ ವರ್ಷಧಾರೆಯಾಗಲಿದೆ. ವಾತಾವರಣದಲ್ಲಿ ದಿಢೀರ್ ಬದಲಾವಣೆಯಿಂದ ಭಾನುವಾರ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಕೆಲವೆಡೆ ಹಗುರದಿಂದ ಕೂಡಿದ ಸಾಧಾರಣ ಮಳೆ ಬಿದ್ದಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯು ಮುಂದಿನ 2-3 ದಿನಗಳಲ್ಲಿ ಚಂಡಮಾರುತವಾಗಿ ಉಂಟಾಗಲಿದೆಯೋ ಅಥವಾ ಇಲ್ಲವೋ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.