ಬೀದರ್:- ವಸತಿ ಶಾಲೆಗಳಲ್ಲಿ 12 ಸಾವಿರ ಹುದ್ದೆಗಳು ಖಾಲಿ ಇವೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಅರವಿಂದಕುಮಾರ ಅರಳಿಯವರು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು, ಬೋಧಕ, ಬೋಧಕೇತರ ಹಾಗೂ ಗ್ರುಪ್ ‘ಡಿ’ ಸೇರಿದಂತೆ ಒಟ್ಟು 19,094 ಹುದ್ದೆಗಳು ಸರ್ಕಾರದಿಂದ ಮಂಜೂರಾಗಿವೆ.
ಇದರಲ್ಲಿ 6,403 ಕಾಯಂ ಹುದ್ದೆಗಳಿವೆ. 12,696 ಹುದ್ದೆಗಳು ಖಾಲಿ ಉಳಿದಿವೆ. ಅತಿಥಿ ಶಿಕ್ಷಕ/ಉಪನ್ಯಾಸಕರನ್ನು ಏಜೆನ್ಸಿ ಮೂಲಕ ಜಿಲ್ಲಾ ಹಂತದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಸ್ವಂತ ಕಟ್ಟಡದಲ್ಲಿ ಕೆಲಸ ನಿರ್ವಹಿಸುತ್ತಿರುವ ವಸತಿ ಶಾಲೆಗಳ ಪೈಕಿ 91 ಶಾಲೆ/ಕಾಲೇಜುಗಳಿಗೆ ಕಂಪ್ಯೂಟರ್ ಲ್ಯಾಬ್ಗಳ ಸೌಕರ್ಯ ಕಲ್ಪಿಸಲಾಗಿದೆ. 25 ವಸತಿ ಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಅಳವಡಿಸಲು ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ತಿಳಿಸಿದ್ದಾರೆ.