ಬೆಂಗಳೂರು:- ಕೊರೊನಾ ಲಕ್ಷಣ ಕಂಡು ಬಂದ್ರೆ ನಿರ್ಲಕ್ಷ್ಯ ಬೇಡ, ಕಡ್ಡಾಯ ಪರೀಕ್ಷೆ ಮಾಡಿಸಿ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ ವರದಿಯಾಗುತ್ತಿದೆ. ಕರ್ನಾಟಕದಲ್ಲಿ ಈವರೆಗೆ 58 ಕೋವಿಡ್ ಪಾಸಿಟಿವ್ ಕೇಸ್ ಇವೆ. ಈ ಪೈಕಿ 11 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ಕು ತಿಂಗಳಿನಲ್ಲಿ ಕೊರೊನಾದಿಂದ ಒಬ್ಬರು ಸಾವನ್ನಪ್ಪಿದ್ದು, ಈಗ ಕರೊನಾ ಹೆಚ್ಚಾಗುತ್ತದೆ ಎಂಬ ಬಗ್ಗೆ ಮಾಹಿತಿಯಿದೆ. ಹೀಗಾಗಿ ಕೇಂದ್ರದ ಅಧಿಕಾರಿಗಳ ಜತೆ ನಮ್ಮ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಐಎಲ್ಐ ಹಾಗೂ ಸಾರಿ ಪ್ರಕರಣ ಕಂಡು ಬಂದರೆ ಕಡ್ಡಾಯವಾಗಿ ಟೆಸ್ಟ್ ಮಾಡಬೇಕು. ಕೊರೊನಾ ಲಕ್ಷಣ ಕಂಡು ಬಂದರೆ ಕಡ್ಡಾಯ ಪರೀಕ್ಷೆಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ವರದಿ ಬಂದ ನಂತರ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದೆಯಾ ಎಂಬುವುದು ಗೊತ್ತಾಗುತ್ತೆ. ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ, ಯಾವುದೇ ಗಂಭೀರ ತೊಂದರೆ ಆಗಲ್ಲ. ಯಾರಿಗೆ ರೋಗ ಲಕ್ಷಣಗಳು ಕಂಡು ಬಂದರೆ ಪರೀಕ್ಷಿಸಿಕೊಳ್ಳಿ. ಕೊರೊನಾ ಪರೀಕ್ಷೆಗೆ ಹೆಚ್ಚಿನ ಕಿಟ್ ಖರೀದೀಗೆ ಸೂಚಿಸಲಾಗಿದೆ. ಮುಂದಿನ ಮೂರು ತಿಂಗಳಿಗೆ ಅಗತ್ಯವಿರುವಷ್ಟು ಟೆಸ್ಟಿಂಗ್ ಕಿಟ್ ಖರೀದಿಗೆ ಸೂಚಿಸಲಾಗಿದ್ದು, ಎಲ್ಲಾ ಆಸ್ಪತ್ರೆಯಲ್ಲಿ ಅಧಿಕಾರಿಗಳಿಗೆ ಮಾಕ್ ಡ್ರಿಲ್ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಆಸ್ಪತ್ರೆಗಳಲ್ಲಿ ನ್ಯೂನ್ಯತೆ ಕಂಡು ಬಂದರೆ ಸರಿಪಡಿಸುವಂತೆ ಸೂಚಿಸಿದ ಅವರು, ಮಂಗಳವಾರ ಡಾ.ರವಿ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ. ತಜ್ಞರಿಂದ ಸಲಹೆಗಳನ್ನು ಪಡೆಯುತ್ತೇವೆ. ಯಾರೂ ಭಯಪಡುವ ಅಗತ್ಯವಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಸಿದ್ಧತೆ ಮಾಡಿಕೊಳ್ಳಬೇಕು. ಮಾರ್ಗಸೂಚಿ ಹೊರಡಿಸುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದರು.