ಬೆಂಗಳೂರು:- ಅಪಾರ್ಟ್ಮೆಂಟ್ವೊಂದರಲ್ಲಿ ಕುಳಿತು ಆಟವಾಡುತ್ತಿದ್ದ ಮಗುವಿನ ಮೇಲೆಯೇ ಕಾರು ಹತ್ತಿರುವ ಘಟನೆ ಕಸುವಿನಹಳ್ಳಿಯ ಅಪಾರ್ಟ್ಮೆಂಟ್ವೊಂದರ ಮುಂಭಾಗ ನಡೆದಿದೆ. ಕಳೆದ 10 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಜೋಗ್ ಜುತಾರ್, ಅನಿತಾ ದಂಪತಿಗೆ ಸೇರಿದ ಅರ್ಬಿನಾ (3) ಮಗುವಿನ ಮೇಲೆ ಚಾಲಕ ಕಾರು ಹತ್ತಿಸಿ ಹತ್ಯೆಗೈದಿದ್ದಾನೆ. ಅಮಾನವಿಯ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೊದಲು ತಮ್ಮ ಅರಿವಿಗೆ ಬಾರದೇ ಕಟ್ಟಡದ ಮೇಲಿಂದ ಮಗು ಬಿದ್ದಿರುವುದಾಗಿ ಪೋಷಕರು ದೂರು ಕೊಟ್ದಿದ್ದರು. ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯದಲ್ಲಿ ಮಗು ಮೃತಪಟ್ಟಿರುವುದಾಗಿ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದರು. ಆದ್ರೆ ಮಗುವಿನ ದೇಹದಲ್ಲಿ ರಕ್ತಸ್ರಾವ ಆಗುತ್ತಿದ್ದುದ್ದನ್ನು ಕಂಡು ಅನುಮಾನಗೊಂಡ ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲಿಸಿದ್ದಾರೆ. ನಂತರ ಎಕ್ಸ್ ಯುವಿ ಕಾರು ಮಗುವಿನ ಮೇಲೆ ಹರಿದಿರುವುದು ಗೊತ್ತಾಗಿದೆ.
ಸದ್ಯ ಕೃತ್ಯ ಎಸಗಿದ ಅಪಾರ್ಟ್ಮೆಂನ ಸುಮನ್ ಎಕ್ಸ್ ಯುವಿ ಕಾರು ಚಾಲಕನ ವಿರುದ್ಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.