ಬೆಂಗಳೂರು: ವಿಷ್ಣುವರ್ಧನ್ (Vishnuvardhan) ಅಂತ್ಯ ಸಂಸ್ಕಾರವಾದ ಜಾಗದಲ್ಲಿ ಪುಣ್ಯಭೂಮಿ ಆಗಬೇಕು ಎಂದು ವಿಷ್ಣು ಅಭಿಮಾನಿಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ವಿಷ್ಣುವರ್ಧನ್ ಅಭಿಮಾನಿಗಳೆಲ್ಲರೂ ಸೇರಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ (Protest) ಹಮ್ಮಿಕೊಂಡಿದ್ದಾರೆ
ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ ಎ ನಾರಾಯಣಗೌಡ ಮತ್ತು ಡಾ ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಪ್ರತಿನಿಧಿಗಳು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭಾನುವಾರ ಭೇಟಿ ಮಾಡಿದರು.
ಬೆಂಗಳೂರಿನ ಉತ್ತರಹಳ್ಳಿ-ಕೆಂಗೇರಿ ಮುಖ್ಯರಸ್ತೆಯಲ್ಲಿ ವಿಷ್ಣುವರ್ಧನ್ ಸಮಾಧಿ ಸ್ಥಳ ಸೇರಿದಂತೆ ಆರು ಗುಂಟೆ ಜಾಗವನ್ನು ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಸರಕಾರದಿಂದ ಮಂಜೂರು ಮಾಡಿಸಬೇಕು ಎಂದು ಮನವಿ ಸಲ್ಲಿಸಿದರು.