ಬೆಳಗಾವಿ:- ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಜಾರಿಗೆ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ. ಮಾದಿಗ ಮುನ್ನಡೆ ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಬೇಕು.
ಮಾಧುಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟ ಉಪಸಮಿತಿ ನೀಡಿದ ವರದಿ ಆಧರಿಸಿ ಒಳ ಮೀಸಲಾತಿ ಜಾರಿ ಮಾಡಬೇಕು’ ಎಂದೂ ಆಗ್ರಹಿಸಿದರು.
ಪರಿಶಿಷ್ಟರಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಜಾರಿ ಮಾಡಬೇಕು. ಆ ಮೂಲಕ ಅನ್ಯಾಯಕ್ಕೆ ಒಳಗಾಗಿರುವ ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಬೇಕು’ ಎಂದು ಬಿಜೆಪಿ ಮುಖಂಡ ಗೋವಿಂದ ಕಾರಜೋಳ ಹೇಳಿದರು.