ಧಾರವಾಡ: ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಕೆಲ ವಿಕಲಚೇತ ನರಿಗೆ ಸಾಂಕೇತಿಕವಾಗಿ ತ್ರಿಚಕ್ರ ವಾಹನಗಳನ್ನು ವಿತರಿಸಿದ್ದ ಸಿಎಂ ಸಿದ್ದರಾಮಯ್ಯ, ನಾವು ಅಂಗವಿಕಲರು ಎಂದು ಕಿನ್ನತೆಗೆ ಒಳಗಾಗದೇ ಧೈರ್ಯದಿಂದ ಜೀವನ ನಡೆಸಬೇಕು ಎಂದು ಧೈರ್ಯ ಹೇಳಿದರು.
DK Shivkumar: ಪ್ರತಾಪ್ ಸಿಂಹರನ್ನು ಟ್ರ್ಯಾಪ್ ಮಾಡಲಾಗ್ತಿದೆ ಆರೋಪಕ್ಕೆ ಡಿಕೆಶಿ ಹೇಳಿದ್ದೇನು?
ಇಡೀ ದೇಶದಲ್ಲಿ ಸಂಪತ್ತನ್ನು ಉತ್ಪಾದನೆ ಮಾಡುವವರು ಕಾಯಕ ಜೀವಿಗಳು. ಅದನ್ನೇ ಬಸವಾದಿ ಶರಣರು ಕಾಯಕ ಮತ್ತು ದಾಸೋಹ ಎಂದಿದ್ದರು. ಯಾರು ಉತ್ಪಾದನಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೋ ಅವರೆಲ್ಲ ಕಾಯಕ ಯೋಗಿಗಳು. ಇದನ್ನು ಪ್ರೊಡಕ್ಷನ್ ಮತ್ತು ಡಿಸ್ಟ್ರಿಬ್ಯುಷನ್ ಎನ್ನುತ್ತೇವೆ. ಸಮಾಜದಲ್ಲಿ ಶೇ.90 ರಷ್ಟು ಸಂಪತ್ತು ಕೇವಲ ಶೇ.10 ಜನರಲ್ಲಿ ಕೇಂದ್ರೀಕೃತವಾಗಿದೆ. ಸಮಾಜದಲ್ಲಿ ಐತಿಹಾಸಿಕ ಕಾರಣಗಳಿಂದ ಅಸಮಾನತೆ ಇದೆ. ಈ ಅಸಮಾನತೆ ಹೋಗಲಾಡಿಸುವುದನ್ನು ಅಂಬೇಡ್ಕರ್ ಒತ್ತಿ ಹೇಳಿದ್ದರು ಎಂದರು.