ಗಾಂಧಿನಗರ: ಅಮೆರಿಕದ ಪೆಂಟಗನ್ ಮೀರಿಸುವ ಹೊಸ ಕಚೇರಿ ಸಂಕೀರ್ಣವು ಭಾರತದಲ್ಲಿ ತಲೆ ಎತ್ತಿದ್ದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟನೆ ನೆರವೇರಿಸಿದ್ದಾರೆ. ವಿಶ್ವದ ಅತಿದೊಡ್ಡ ಕಾರ್ಪೊರೇಟ್ ಕಚೇರಿ ಕೇಂದ್ರವಾದ `ಸೂರತ್ ಡೈಮಂಡ್ ಬೋರ್ಸ್’ (Surat Diamond Bourse) ಅನ್ನು ಮೋದಿ ಅವರು ಇಂದು ಉದ್ಘಾಟಿಸಿ ಶುಭಹಾರೈಸಿದ್ದಾರೆ. ಈ ಮೂಲಕ ಗುಜರಾತ್ನ (Gujarat) ಸೂರತ್ ನಗರವು ವಜ್ರದ ರಾಜಧಾನಿಯಾಗುವ ಮಹತ್ವಾಕಾಂಕ್ಷೆಯನ್ನು ಖಚಿತಪಡಿಸಿದೆ.
ಡೈಮಂಡ್ ಬೋರ್ಸ್ ವಿಶೇಷತೆ ಏನು?
ಸೂರತ್ ಡೈಮಂಡ್ ಬೋರ್ಸ್ 35.54 ಎಕರೆ ಭೂಪ್ರದೇಶದಲ್ಲಿ, 3,400 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಈ ಮೂಲಕ ಇದು 1943ರಲ್ಲಿ 6.5 ಮಿಲಿಯನ್ ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಪೆಂಟಗನ್ ಸಂಕೀರ್ಣ ಕಚೇರಿಯನ್ನೂ ಹಿಂದಿಕ್ಕಿದೆ. 4,500ಕ್ಕೂ ಹೆಚ್ಚು ನೆಟ್ವರ್ಕ್ ಕಚೇರಿಗಳನ್ನು ಒಳಗೊಂಡಿದ್ದು ವಿಶ್ವದಲ್ಲೇ ಅತಿದೊಡ್ಡ ಕಚೇರಿ ಸಂಕೀರ್ಣ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.
ಸೂರತ್ನ ಡೈಮಂಡ್ ಬೋರ್ಸ್ ಅಂತಾರಾಷ್ಟ್ರೀಯ ವಜ್ರ ಮತ್ತು ಆಭರಣ (Diamond And Jewellery) ವ್ಯಾಪಾರದ ಜಾಗತಿಕ ಕೇಂದ್ರವಾಗಲಿದೆ. 65,000ಕ್ಕೂ ಹೆಚ್ಚು ವಜ್ರದ ವ್ಯಾಪಾರಿಗಳಿಗೆ ಒನ್ಸ್ಟಾಪ್ ಡೆಸ್ಟಿನೇಶನ್ ಆಗಿದ್ದು, ಕಟ್ಟರ್, ಪಾಲಿಷರ್ ವಜ್ರಗಳು ಹಾಗೂ ವಜ್ರದ ಆಭರಣಗಳ ವ್ಯಾಪಾರ, ವಹಿವಾಟು ನಡೆಯಲಿದೆ. ಈ ಕಟ್ಟಡವು 175 ದೇಶಗಳ 4,200 ವ್ಯಾಪಾರಿಗಳನ್ನು ಒಳಗೊಂಡಿದೆ.
DK Shivkumar: ಪ್ರತಾಪ್ ಸಿಂಹರನ್ನು ಟ್ರ್ಯಾಪ್ ಮಾಡಲಾಗ್ತಿದೆ ಆರೋಪಕ್ಕೆ ಡಿಕೆಶಿ ಹೇಳಿದ್ದೇನು?
ಆಮದು-ರಫ್ತಿಗಾಗಿ ಅತ್ಯಾಧುನಿಕ `ಕಸ್ಟಮ್ಸ್ ಕ್ಲಿಯರೆನ್ಸ್ ಹೌಸ್’ (Customs Clearance House) ಅನ್ನೂ ಹೊಂದಿದೆ. ಜೊತೆಗೆ ಚಿಲ್ಲರೆ ಆಭರಣ ವ್ಯಾಪಾರಕ್ಕಾಗಿ ಆಭರಣ ಮಳಿಗೆ ಮತ್ತು ಅಂತರರಾಷ್ಟ್ರೀಯ ಬ್ಯಾಂಕಿಂಗ್ ಮತ್ತು ಸುರಕ್ಷಿತ ವಾಲ್ಟ್ಸ್ಗಳ ಸೌಲಭ್ಯವೂ ಇಲ್ಲಿದೆ. ಮನರಂಜನಾ ವಲಯ ಮತ್ತು ಪಾರ್ಕಿಂಗ್ಗೆ 20 ಲಕ್ಷ ಚದರ ಅಡಿ ವಿಸ್ತೀರ್ಣ ಪ್ರದೇಶವನ್ನು ಮೀಸಲಿಡಲಾಗಿದೆ.