ಬೆಳಗಾವಿ: ಜಿಲ್ಲೆಯ ವಂಟಮೂರಿ ಗ್ರಾಮದ ಮಹಿಳೆಯೊಬ್ಬರನ್ನು (Woman) ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಧಿಕೃತವಾಗಿ ಬೆಂಗಳೂರಿನ ಸಿಐಡಿ (Woman) ಕಚೇರಿಗೆ ತೆರಳಿ ಕೇಸ್ನ ಕಡತಗಳನ್ನು ತನಿಖಾಧಿಕಾರಿ ಹಾಗೂ ಎಸಿಪಿ ಗಿರೀಶ್ ಅವರಿಗೆ ಹಸ್ತಾಂತರಿಸಲಾಗಿದೆ.
ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಗದಗದಲ್ಲಿ ಮಾತನಾಡಿದ್ದು, ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಪ್ರಕರಣದ ತನಿಖೆ ಮಾಡಲು ನಮ್ಮ ಪೊಲೀಸರು ಸಮರ್ಥರಿದ್ದಾರೆ.
MP Renukacharya: ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಂತೆ: ಎಂಪಿ ರೇಣುಕಾಚಾರ್ಯ ವಾಗ್ದಾಳಿ
ಸಾಕ್ಷ್ಯ ಸಂಗ್ರಹಿಸಿ ಶಿಕ್ಷೆ ಕೊಡಿಸಲು ಪೊಲೀಸರೇ ತಯಾರಾಗಿದ್ದಾರೆ ಎಂದು ಹೇಳಿದ್ದರು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡ ಬೆಳಗಾವಿಗೆ ಆಗಮಿಸಿದೆ. ಡಿಎಸ್ಪಿ ಮಟ್ಟದ ಅಧಿಕಾರಿಗಳ ತಂಡದಿಂದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಸೋಮವಾರ ಬೆಳಗಾವಿಗೆ ಡಿಐಜಿ ಸುನೀಲ್ ಕುಮಾರ್ ಮೀನಾ ಆಗಮಿಸಲಿದ್ದಾರೆ.
ಪ್ರಕರಣದ ತನಿಖಾಧಿಕಾರಿ ಎಸಿಪಿ ಗಿರೀಶ್ ಅವರನ್ನು ಕರೆಸಿಕೊಂಡು ಘಟನೆ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ನಡೆದ ಬಳಿಕ ಪೊಲೀಸರು ಏನೆಲ್ಲಾ ಮಾಡಿದ್ದಾರೆ. ಬಳಿಕ ಯಾವೆಲ್ಲ ಕ್ರಮ ಕೈಕೊಂಡಿದ್ದಾರೆ ಎಂದು ಮಾಹಿತಿ ಪಡೆದುಕೊಂಡಿದ್ದು, ಪ್ರಕರಣದ ಕುರಿತಾಗಿ ಮತ್ತೆ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಉಳಿದ ಇಬ್ಬರಿಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.