ಬೆಂಗಳೂರು: ನಗರದ ಏರ್ಪೋರ್ಟ್ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತವಾಗಿದ್ದು 8ಕ್ಕೂ ಹೆಚ್ಚು ವಾಹನ ಒಂದಕ್ಕೊಂಡು ಡಿಕ್ಕಿ ಹೊಡೆದು ಜಖಂಗೊಂಡಿವೆ.
ಬೆಂಗಳೂರು-ದೇವನಹಳ್ಳಿ ಏರ್ಪೋರ್ಟ್ ರಸ್ತೆ ಸಾದಹಳ್ಳಿ ಗೇಟ್ ಬಳಿ ಇಂದು ಅಪಘಾತವಾಗಿದ್ದು ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾದಹಳ್ಳಿ ಗೇಟ್ ಬಳಿ ಸರಣಿ ಅಪಘಾತವಾಗಿದೆ.
8ಕ್ಕು ಹೆಚ್ಚು ವಾಹನ ಒಂದಕ್ಕೊಂಡು ಡಿಕ್ಕಿ ಹೊಡೆದು ಜಖಂ ಆಗಿದ್ದು ಸರಣಿ ಅಪಘಾತದಿಂದ ಏರ್ಪೋರ್ಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ.
ಟ್ರಾಫಿಕ್ ಜಾಮ್ ನಿಂದ ಏರ್ಪೋರ್ಟ್ ರಸ್ತೆಯಲ್ಲಿ ಅರ್ಧಗಂಟೆ ಪರದಾಡಿದ ವಾಹನ ಸವಾರರು ಸ್ಥಳಕ್ಕಾಗಮಿಸಿದ ಚಿಕ್ಕಜಾಲ ಸಂಚಾರಿ ಪೊಲೀಸರಿಂದ ಸುಗಮ ಸಂಚಾರ ವ್ಯವಸ್ಥೆ ಮಾಡಿಕೊಡಲಾಯಿತು.!