ಮೈಸೂರು: ಸಂಸದ ಪ್ರತಾಪ್ ಸಿಂಹ ಅವರನ್ನು ಸಂಸತ್ ದಾಳಿ ಪ್ರಕರಣದಲ್ಲಿ ಟ್ರ್ಯಾಪ್ ಮಾಡಲಾಗಿದೆ ಎಂಬ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಹೇಳಿಕೆ ಪ್ರಕರಣದ ದಿಕ್ಕು ತಪ್ಪಿಸುವ ಯತ್ನವಾಗಿದೆ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು,
ಪಾರ್ಲಿಮೆಂಟ್ ನಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆ ಕುರಿತು ಲೆಹರ್ ಸಿಂಗ್ ನೀಡಿರುವ ಹೇಳಿಕೆ ಬೇಜವಾಬ್ದಾರಿತನದಿಂದ ಕೂಡಿದೆ. ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಹೇಳಿಕೆಗಳನ್ನು ನೀಡುವ ಮೂಲಕ ತನಿಖೆಯ ದಿಕ್ಕು ತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.
Aishwarya Rai: ಗಂಡನ ಮನೆಯಿಂದ ಹೊರಬಂದ ಐಶ್ವರ್ಯಾ ರೈ..! ಬಿಗ್’ಬಿ ಮನೆಯಲ್ಲಿ ಅತ್ತೆ-ಸೊಸೆಯ ಬಿರುಕು
ಸಿಎಂ ಸಿದ್ದರಾಮಯ್ಯನವರು ಪುತ್ರ ಯತೀಂದ್ರರನ್ನು ಲೋಕಸಭಾ ಚುನಾವಣಾ ಕಣಕ್ಕಿಳಿಸುವ ಸಲುವಾಗಿ, ಸಂಸದ ಪ್ರತಾಪ್ ಸಿಂಹರನ್ನು ಸಿಲುಕಿಸಲು ಯತ್ನಿಸಿದ್ದಾರೆಂದು ಲೆಹರ್ ಸಿಂಗ್ ಹೇಳಿರುವುದು ಬೇಜವಾಬ್ದಾರಿತನದಿಂದ ಕೂಡಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿ ಟಿ ರವಿ ನೀಡಿರುವ ಹೇಳಿಕೆಯೂ ಸರಿಯಲ್ಲ. ಸಂಸತ್ ನಲ್ಲಿ ನಡೆದಿರುವ ಘಟನೆಯನ್ನು ಟೂಲ್ ಕಿಟ್ ನ ಭಾಗ ಎಂದು ಹೇಳಿರುವುದು ಸರಿಯಲ್ಲ ಎಂದು ಲಕ್ಷ್ಮಣ್ ಹೇಳಿದರು.