ಮಡಿಕೇರಿ:- 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಮಾಸ್ಕ್ ಕಡ್ಡಾಯ ಇಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೋವಿಡ್ ವಿಚಾರವಾಗಿ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು.
ಕೊರೋನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೇ ಡಾ. ರವಿ ಅವರ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ಕೂಡಾ ನಿನ್ನಯೇ ಸಭೆ ನಡೆಸಿ ಕೆಲವು ಸಲಹೆಗಳನ್ನ ನೀಡಿದ್ದಾರೆ.
60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿದವರು, ಉಸಿರಾಟದ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯಗೊಳಿಸುವಂತೆ ಸಮಿತಿಯವರು ಸಲಹೆ ನೀಡಿದ್ದಾರೆ. ಸಮಿತಿಯ ಸಲಹೆಗಳನ್ನ ಆಧರಿಸಿ ಆರೋಗ್ಯ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.