ಕಲಬುರ್ಗಿ:- ನ್ಯೂ ಇಯರ್ ಗೈಡ್ಲೆನ್ಸ್ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ಸಚಿವ ಶರಣ ಪ್ರಕಾಶ ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಕೋವಿಡ್ ಹೊಸ ರೂಪಾಂತರಿ ತಳಿ ಎಂಟ್ರಿ ಹಿನ್ನಲೆ, ಈ ಕೋರೊನಾ ಎಷ್ಟರಮಟ್ಟಿಗೆ ಅಪಾಯಕಾರಿ ಇದೆ ಅನ್ನೊದು ಇನ್ನೂ ತಿಳಿದಿಲ್ಲ. ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೆನೆ. ಆರೋಗ್ಯ ಸಚಿವ ಗುಂಡೂರಾವ್ ಕೂಡ ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ. ನ್ಯೂ ಇಯರ್ ಗೈಡ್ಲೆನ್ಸ್ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ಕಲಬುರಗಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿಕೆ ನೀಡಿದ್ದಾರೆ.