ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಹೆಚ್ಚಿದ ಚಳಿ, ಕರಾವಳಿ ಭಾಗದಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ. ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಹ ಆಗಲಿದೆ. ಇನ್ನು ಮಲೆನಾಡು ಭಾಗದಲ್ಲಿ ಎರಡು ದಿನದಿಂದ ಚಳಿಯ ಪ್ರಮಾಣ ಹೆಚ್ಚಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು, ಮೈಸೂರು ಭಾಗದಲ್ಲೂ ಗರಿಷ್ಠ ಉಷ್ಣಾಂಶದಲ್ಲಿ ಏರಿಳಿತ ಕಂಡು ಬಂದಿದ್ದು, ಚಳಿಯ ಅನುಭವ ಹೆಚ್ಚಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಾರವಾರ ಹಾಗೂ ಮಂಗಳೂರಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 24 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.