ಬೆಂಗಳೂರು: ಹಿಟ್ ಆ್ಯಂಡ್ ರನ್ಗೆ (Hit&Run) ವೃದ್ಧೆ (Old Woman) ಬಲಿಯಾದ ಘಟನೆ ಬ್ಯಾಟರಾಯನಪುರ (Byatarayanapura) ಬಳಿಯ ಮೈಸೂರು ರೋಡ್ನಲ್ಲಿ (Mysuru Road) ನಡೆದಿದೆ.
ಜಯಲಕ್ಷ್ಮಿ ಮೃತ ವೃದ್ಧೆ. ಇಂದು ಬೆಳಗ್ಗೆ 6 ಗಂಟೆಯ ವೇಳೆಗೆ ಘಟನೆ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ವೃದ್ಧೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಚಾಲಕ ವಾಹನದ ಸಮೇತ ಪರಾರಿಯಾಗಿದ್ದಾನೆ. ವಾಹನ ಡಿಕ್ಕಿ ಹೊಡೆದ ರಭಸಕ್ಕೆ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.
ಮೃತ ವೃದ್ಧೆ ಹೊಸಗುಡ್ಡದಹಳ್ಳಿ ನಿವಾಸಿಯಾಗಿದ್ದು, ಅಗರಬತ್ತಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪೊಲೀಸರು ಸಿಸಿಟಿವಿ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ