ಬಾಗಲಕೋಟೆ: 15 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬೀಳಗಿಯ ಸರ್ವೇಯರ್ ಬಿದ್ದಿದ್ದಾನೆ. ಸರ್ವೇಯರ್ ಮಹಾಂತೇಶ್ ಕವಳಿಕಟ್ಟಿ, ಅಣ್ಣೇಶಿ ಲಮಾಣಿ ಎಂಬವರಿಂದ 15 ಸಾವಿರ ರೂ. ಹಣ ಪಡೆಯುವಾಗ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುನಗ ಗ್ರಾಮದಲ್ಲಿದ್ದ 8 ಎಕರೆ ಜಮೀನಿನ ಪಿಟಿ ಶೀಟ್ ಮಾಡಿ ಕೊಡಲು ಆತ ಲಂಚ ಕೇಳಿದ್ದ.
Beauty Tips: ಮುಖದ ಮೇಲಿನ ಮಚ್ಚೆ ಅಂದ ಹಾಳು ಮಾಡುತ್ತಿದ್ರೆ ಇಲ್ಲಿದೆ ನೋಡಿ ಬೆಸ್ಟ್ ಎಣ್ಣೇ.!!
ಈ ಹಿಂದೆ 28 ಸಾವಿರ ರೂ. ಪಡೆದು ಕೆಲಸ ಮಾಡಿಕೊಟ್ಟಿರಲಿಲ್ಲ. ಅಲ್ಲದೇ 38 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ತಿಳಿದು ಬಂದಿದೆ. 15 ಸಾವಿರ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಆತ ಸಿಕ್ಕಿಬಿದ್ದಿದ್ದಾನೆ. ಮಹಾಂತೇಶ್ ಕವಳಿಕಟ್ಟಿಯನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ಹನುಮಂತರಾಯ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಪುಷ್ಪಲತಾ ನೇತೃತ್ವದಲ್ಲಿ ದಾಳಿ ನಡೆದಿದೆ.