ಚನ್ನೈ: ಭಾರತ ಕ್ರಿಕೆಟ್ ತಂಡ ಮಾಜಿ ನಾಯಕ ಎಂಎಸ್ ಧೋನಿ ಮೇಲೆ ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿದ್ದ ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.
2013ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿ ಬಂದಿತ್ತು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮ್ಯಾಚ್ ಫಿಕ್ಸಿಂಗ್ ಮಾಡಿದ್ದಾರೆ. ಅವರು ಬುಕ್ಕಿಗಳೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಪ್ರಕರಣದ ತನಿಖೆ ನಡೆಸಿದ್ದ ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ತಿಳಿಸಿದ್ದರು.
ಈ ಆರೋಪದ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, 2014 ರಲ್ಲಿ ಐಪಿಎಸ್ ಅಧಿಕಾರಿ ವಿರುದ್ಧ ಎಂಎಸ್ ಧೋನಿ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.