ಬೆಂಗಳೂರು: ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ, ಭೂಮಿ ಮೇಲೆ ನರಕದ ಪರಿಚಯ ಮಾಡಿಸಿದ ಮಹಾಮಾರಿ ಕೊರೊನಾ(Coronavirus) ಸದ್ಯ ತನ್ನ ಆರ್ಭಟ ಮತ್ತೆ ತೋರುತ್ತಿದೆ. ಇದೀಗ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವ್ಯಕ್ತಿಯೋರ್ವನಿಗೆ ಕೊರೊನಾ ಸೋಂಕು (Corona Virus) ದೃಢಪಟ್ಟಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.
ಕೇರಳದಲ್ಲಿ (Kerala) ಕೊರೊನಾ ರೂಪಾಂತರಿ JN.1 ಕೇಸ್ (Corona JN.1 Case) ಪತ್ತೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಜ್ವರದಿಂದಾಗಿ ಆಸ್ಪತ್ರೆಗೆ (Mandya Hospital) ತೆರಳಿದ್ದು, ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿರುವುದು ಗೊತ್ತಾಗಿದೆ. ಕೋವಿಡ್ ಸೋಂಕಿತ ವ್ಯಕ್ತಿಯ ಕುಟುಂಬಸ್ಥರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಅವರೆಲ್ಲರಿಗೂ ನೆಗೆಟಿವ್ ಬಂದಿದೆ. ಸೋಂಕಿತ ವ್ಯಕ್ತಿ ಮಂಗಳವಾರವೇ (ಇಂದು) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ ಎಂದು ವೈದ್ಯರು ತಿಳಿಸಿದ್ದಾರೆ