ರೋಹಿತ್ ಶರ್ಮಾರನ್ನು ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ಕಿತ್ತು ಹಾಕಿದ ಹಿನ್ನೆಲೆ, ಅಭಿಮಾನಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಮುಂಬೈ ಇಂಡಿಯನ್ಸ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ವಾರ್ ಶುರು ಮಾಡಿಕೊಂಡಿದ್ದಾರೆ. ರೋಹಿತ್ ಕ್ಯಾಪ್ಟನ್ ಆಗಿದ್ದಾಗ 13.5 ಮಿಲಿಯನ್ ಎಕ್ಸ್ ಫಾಲೋವರ್ ಗಳನ್ನು ಹೊಂದಿದ್ದ ಮುಂಬೈ ಫಾಲೋವರ್ ಸಂಖ್ಯೆ ಇದೀಗ ಏಕಾಏಕಿ 12.3 ಮಿಲಿಯನ್ ಗೆ ಇಳಿಕೆಯಾಗಿದೆ.
ರೋಹಿತ್ ರನ್ನು ನಾಯಕತ್ವದಿಂದ ಕಿತ್ತು ಹಾಕಿದ ಬೆನ್ನಲ್ಲೇ ಅಭಿಮಾನಿಗಳು ಮುಂಬೈ ಇಂಡಿಯನ್ಸ್ ಜೆರ್ಸಿ, ಬಾವುಟ ಸುಟ್ಟು ಹಾಕಿ ಆಕ್ರೋಶ ಹೊರಹಾಕಿದ್ದರು.
ಇದೀಗ ನಮಗೆ ಮುಂಬೈ ಇಂಡಿಯನ್ಸ್ ಗಿಂತಲೂ ರೋಹಿತ್ ಶರ್ಮಾ ದೊಡ್ಡವರು ಎಂದು ಎಕ್ಸ್ ನಲ್ಲಿ ಅಭಿಯಾನವನ್ನೇ ಶುರು ಮಾಡಿದ್ದಾರೆ.