ರಾಯಚೂರು:- MP ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ ಎಂದು ಸಚಿವ ಭೋಸರಾಜು ಹೇಳಿದ್ದಾರೆ.
ಈ ಬಾರಿ ದೇಶದಲ್ಲಿ ಹಿಂದೆ ಜನಪರ ಆಡಳಿತ ನೀಡಿರುವ ಕಾಂಗ್ರೆಸ್ ಪಕ್ಷಕ್ಕೆ ಜನರು ಒಲವನ್ನು ತೋರುತ್ತಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸುವ ಮೂಲಕ ಕೇಂದ್ರದಲ್ಲಿ ಅಧಿಕಾರಕ್ಕೆ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾವೆಲ್ಲರೂ ರಾಯಚೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲುವಿಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು. ಸಭೆಯಲ್ಲಿ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.