ನವದೆಹಲಿ: ಅಮಾನತಾಗಿರುವ ಲೋಕಸಭೆಯ (Loksabha) 95 ಹಾಗೂ ರಾಜ್ಯಸಭೆಯ (Rajyasabha) 46 ಒಟ್ಟು 141 ಮಂದಿ ಸಂಸದರು ಸಂಸತ್ತಿನ ಚೇಂಬರ್, ಲಾಬಿ ಹಾಗೂ ಗ್ಯಾಲರಿಗೆ ಪ್ರವೇಶಿಸುವಂತಿಲ್ಲ ಎಂದು ಲೋಕಸಭಾ ಕಚೇರಿಯಿಂದ (Loksabha Office) ಸುತ್ತೋಲೆ ಹೊರಡಿಸಲಾಗಿದೆ.
ಸಂಸತ್ ಭವನದಲ್ಲಿ ಉಂಟಾದ ಭದ್ರತಾ ಲೋಪ (Security breach in Lok Sabha) ಕುರಿತ ಚರ್ಚೆಗೆ ಒತ್ತಾಯಿಸಿ ಉಭಯ ಸದನಗಳಲ್ಲಿ ಅಶಿಸ್ತಿನ ವರ್ತನೆ ತೋರಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿನ ವಿವಿಧ ಪಕ್ಷಗಳ ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು. ಈ ಬೆನ್ನಲ್ಲೇ ಲೋಕಸಭೆಯ ಸಚಿವಾಲಯ ಈ ಸುತ್ತೋಲೆ ಹೊರಡಿಸಿದೆ
ಸಂಸತ್ ಭವನದಲ್ಲಿ ಉಂಟಾದ ಭದ್ರತಾ ಲೋಪ (Security breach in Lok Sabha) ಕುರಿತ ಚರ್ಚೆಗೆ ಒತ್ತಾಯಿಸಿ ಉಭಯ ಸದನಗಳಲ್ಲಿ ಅಶಿಸ್ತಿನ ವರ್ತನೆ ತೋರಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿನ ವಿವಿಧ ಪಕ್ಷಗಳ ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು. ಈ ಬೆನ್ನಲ್ಲೇ ಲೋಕಸಭೆಯ ಸಚಿವಾಲಯ ಈ ಸುತ್ತೋಲೆ ಹೊರಡಿಸಿದೆ.