ಧಾರವಾಡ: ಬಿಲ್ ಪಾಸ್ ಮಾಡಲು ಹಣಕ್ಕೆ ಬೇಡಿಕೆ ಇಟ್ಡಿರುವ ಇಬ್ಬರು ಅಧಿಕಾರಿಗಳನ್ನ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿ ಬಲೆಗೆ ಕೇಡುವಲ್ಲಿ ಯಶಸ್ವಿಯಾಗಿದ್ದಾರೆ.
ಧಾರವಾಡದ ಏತ ನೀರಾವರಿ ಅಧಿಕಾರಿಗಳಾದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಹಾಗೂ ಕಿರಿಯ ಎಂಜಿನಿಯರ್ ಪ್ರಕಾಶ್ ಹೊಸಮನಿ ಲೋಕಾ ಬಲೆಗೆ ಬಿದ್ದಿರುವ ಅಧಿಕಾರಿಗಳಾಗಿದ್ದಾರೆ. ಉತ್ತರ ಕನ್ನಡದ ಬಾಲಕೃಷ್ಣ ನಾಯ್ಕ ಎನ್ನುವ ಕಂಟ್ರಾಕ್ಟರ್ ಕಡೆಯಿಂದ ಬಿಲ್ ಪಾಸ್ ಗೆ ಹಣಕ್ಕೆ ಬೇಡಿಕೆ ಇಟ್ಟಿದ್ದರು .
ಗುತ್ತಿಗೆದಾರ ಹಾವೇರಿಯ ಮೂರು ಕಡೆಗಳಲ್ಲಿ ರಸ್ತೆ ಕಾಮಗಾರಿ ಮಾಡಿದ್ದ ಬಾಲಕೃಷ್ಣ ಅವರ ಕಾಮಗಾರಿ ಬಿಲ್ ಪಾಸ್ ಮಾಡಲು ಧಾರವಾಡದ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲು ಪೋನ್ ಪೇ ಮೂಲಕ 83 ಸಾವಿರ ಪಡೆದು ನಂತರ, ತಲಾ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರಂತೆ.
ಸದ್ಯ ಇಂದು ಒಂದು ಲಕ್ಷ ಹಣ ಪಡೆಯುವ ವೇಳೆ ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ ಬಿದ್ದಿದ್ದಾರೆ. ಹಾವೇರಿ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ಲೋಕಾ ದಾಳಿ ಮಾಡಿ ಅಧಿಕಾರಿಗಳಿಬ್ಬರನ್ನ ವಶಕ್ಕೆ ಪಡೆದುಕ್ಕೊಂಡಿದ್ದಾರೆ…