ಬೆಂಗಳೂರು:- ವ್ಯಕ್ತಿಗತವಾಗಿ ಯಾರ ಬಗ್ಗೆಯೂ ಟೀಕೆ ಬೇಡ ಎಂದು ವಿಜಯೇಂದ್ರಗೆ ರೇಣುಕಾಚಾರ್ಯ ಸಲಹೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಪಕ್ಷಕ್ಕೆ ತೊಂದರೆ ಆಗುವ ಹಾಗೂ ವ್ಯಕ್ತಿಗತವಾಗಿ ಯಾರ ಬಗ್ಗೆಯೂ ಟೀಕೆ ಮಾಡಬೇಡಿ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಾಕೀತು ಮಾಡಿದ್ದಾರೆ.
ಗೊಂದಲ ಮೂಡಿಸದಂತೆ ಹಾಗೂ ಪಕ್ಷ ಮತ್ತು ಯಾರ ಬಗ್ಗೆಯೂ ವ್ಯಕ್ತಿಗತವಾಗಿ ಟೀಕೆ ಮಾಡದಂತೆ ವಿಜಯೇಂದ್ರ ಸೂಚಿಸಿದ್ದಾರೆ. ಹೀಗಾಗಿ ನಾನು ಏನೂ ಮಾತನಾಡುವುದಿಲ್ಲ ಎಂದು ರೇಣುಕಾಚಾರ್ಯ ಹೇಳಿ ಹೋಗಿದ್ದಾರೆ.
ಈ ಹಿಂದೆ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಕೆಲ ನಾಯಕರ ವಿರುದ್ಧ ರೇಣುಕಾಚಾರ್ಯ ಬಹಿರಂಗ ಹೇಳಿಕೆ ನೀಡುತ್ತಿದ್ದರು. ರೇಣುಕಾಚಾರ್ಯ ಹೇಳಿಕೆಗಳಿಂದ ಕೆಲ ಅಸಮಾಧಾನಿತರು ಕೆರಳಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಕರೆದು ಇಂದು ಬಿವೈ ವಿಜಯೇಂದ್ರ ತಾಕೀತು ಮಾಡಿದ್ದಾರೆ.