ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್ ಬಳಿ ಬೈಕ್ಗೆ ಕ್ರೊಸರ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.
ಸಿದ್ದಪ್ಪ ಜಂಗಣ್ಣವರ (52) ಸಾವನ್ನಪ್ಪಿದ ರ್ದುದೈವಿ. ಬೈಕ್ಗೆ ಡಿಕ್ಕಿ ಹೊಡೆದ ಕ್ರೂಸರ್, ಪೆಟ್ರೋಲ್ ಬಂಕ್ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಇದರಿಂದ ಕ್ರೊಸರ್ನಲ್ಲಿದ್ದ 15 ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಅಮಿನಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.