ಗದಗ: ಗದುಗಿನಲ್ಲಿ ಅತಿಥಿ ಉಪನ್ಯಾಸಕರು ಸೇವಾ ಖಾಯಮಾತಿಗಾಗಿ ಆಗ್ರಹಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಗದಗ ನಗರದ ಮಹಾತ್ಮಾ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ತಮಟೆ ಬಾರಿಸುತ್ತಾ ಕಾಲ್ನಡಿಗೆಯಲ್ಲಿ ತೆರಳಿದ್ರು. ಬೇಕೆ ಬೇಕು ನ್ಯಾಯ ಬೇಕು ಅತಿಥಿ ಉಪನ್ಯಾಸಕರ ಖಾಯಮಾತಿ ಆಗಲೇಬೇಕು ಅಂತಾ ಘೋಷಣೆ ಕೂಗಿದ್ರು.
ಇನ್ನು ೧೬,೦೦೦ ಅತಿಥಿ ಶಿಕ್ಷಕರನ್ನು ಖಾಯಂ ಮಾಡಲು ದೆಹಲಿ ಸರ್ಕಾರ ವಿಶೇಷ ನಿಯಮಾವಳಿ ರೂಪಿಸಿ ಖಾಯಂಮಾತಿ ಮಾಡಿಕೊಂಡಿದೆ, ಹಾಗೆಯೇ ಹರಿಯಾಣ ಸರ್ಕಾರವು ಕೂಡ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿದ ನಿದರ್ಶನಗಳು ಇವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ನಿಯಮಾವಳಿ ರೂಪಿಸಿ, ಸಚಿವ ಸಂಪುಟ ಸಭೆಯಲ್ಲಿ ದೃಡ ನಿರ್ಧಾರ ಕೈಗೊಳ್ಳುವುದರ ಮೂಲಕ ಅತಿಥಿ ಉಪನ್ಯಾಸಕರನ್ನು ಖಾಯಂ ಗೋಳಿಸಬೆಕುಂದು ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ರು.