ಬಳ್ಳಾರಿ: ಅತಿಥಿ ಉಪನ್ಯಾಸಕರನ್ನು ಖಾಯಂ ಗೊಳಿಸುವಂತೆ ಬಳ್ಳಾರಿಯ ರಾಯಲ್ ವೃತ್ತದಲ್ಲಿ ಸರಪಳಿ ರಚಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ಅತಿಥಿ ಉಪನ್ಯಾಸಕರು ತಮಟೆ, ಡೊಳ್ಳು ಬಾರಿಸಿ ರ್ಯಾಲಿ ನಡೆಸಿದರು. ಕಳೆದ ಕೆಲ ದಿನಗಳಿಂದ ಅನಿರ್ದಿಷ್ಟವಧಿ ಧರಣಿ ನಡೆಸುತ್ತಿದ್ದು,
ಬಳ್ಳಾರಿ ನಗರದ ಸರಳಾದೇವಿ ಕಾಲೇಜಿನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ರ್ಯಾಲಿ ನಡೆಸಿದ್ದಾರೆ. ರ್ಯಾಲಿಯಲ್ಲಿ ನ್ಯಾಯ ಬೇಕು, ವಿ ವಾಂಟ್ ಜಸ್ಟಿಸ್ ಎಂದು ಘೋಷಣೆ ಕೂಗಿದರು. ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರಕಾರಕ್ಕೆ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಿದರು.