ಬೆಂಗಳೂರು:- ಹೆಚ್ ಡಿ ಕುಮಾರಸ್ವಾಮಿ ಅವರು ಭ್ರಮೆಯಲ್ಲಿದ್ದಾರೆ ಮತ್ತು ಭ್ರಮಾಲೋಕದಲ್ಲಿ ತೇಲಾಡುತ್ತಿದ್ದಾರೆ
ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಂಡವರು ಬೇರೆಯವರ ಆಶ್ರಯ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಡಿಕೆ ಸುರೇಶ್ ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ ಮತ್ತು ಮಂಡ್ಯ ಕ್ಷೇತ್ರಗಳಿಂದ ಒತ್ತಡ ಬರುತ್ತಿದೆ ಎಂದು ಕುಮಾರಸ್ವಾಮಿ ಹೇಳಿರುವುದನ್ನು ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದರೆ ಸ್ವಾಗತಿಸುತ್ತೀರಾ ಎಂದು ಸುರೇಶ್ ಅವರನ್ನು ಪತ್ರಕರ್ತರು ಕೇಳಿದಾಗ, ತಾನು ರಾಜಕೀಯಕ್ಕೆ ಬಂದಿದ್ದೇ ಅವರಿಂದ, ಹಾಗಾಗಿ ಅವರು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಸ್ವಾಗತಿಸುವುದಾಗಿ ವ್ಯಂಗ್ಯವಾಗಿ ಹೇಳಿದರು.