ಬೆಂಗಳೂರು:- ಈ ಬಾರಿಯ ಹೊಸ ವರ್ಷಾಚರಣೆಗೆ ಯಾವುದೇ ಅಡ್ಡಿ ಇಲ್ಲ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಹಿಂದಿನ ಕೊರೊನಾ ವೈರಸ್ ಮತ್ತು ಈಗ ಪತ್ತೆಯಾಗಿರುವ ಕೋವಿಡ್ ಉಪತಳಿ JN.1 ಅಪಾಯಕಾರಿಯಲ್ಲ. ಹೀಗಾಗಿ ಯಾರೂ ಭಯಪಡಬೇಕಾಗಿಲ್ಲ. ಆದರೆ, ಮುನ್ನೆಚ್ಚರಿಕೆ ವಹಿಸಿ ಎಂದರು.
ರಾಜ್ಯದಲ್ಲಿ ಎಲ್ಲರೂ ಮಾಸ್ಕ್ ಧರಿಸಬೇಕಾಗಿಲ್ಲ ಮತ್ತು ಹೊಸ ವರ್ಷಾಚರಣೆಗೆ ಏನೂ ಅಡ್ಡಿ ಇಲ್ಲ, ಶಾಲೆಗೆ ಹೋಗುವ ಮಕ್ಕಳು ಮಾಸ್ಕ್ ಧರಿಸಿಕೊಂಡು ಹೋಗುವುದು ಕಡ್ಡಾಯವಲ್ಲ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ಆಕ್ಸಿಜನ್ ಸಿಗದೆ ಚಾಮರಾಜನಗರ ಸೇರಿದಂತೆ ಹಲವು ಕಡೆ ದೊಡ್ಡ ಮಟ್ಟದ ಸಾವುಗಳು ಸಂಭವಿಸಿವೆ. ಆದರೆ, ಈ ಬಾರಿ ಅಂಥ ತಪ್ಪುಗಳು ಮರುಕಳಿಸಬಾರದು ಎನ್ನುವ ಸ್ಪಷ್ಟ ಸೂಚನೆ ನೀಡಿದ್ದಾಗಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರ ಯಾವುದಕ್ಕೂ ಕೊರತೆ ಆಗಬಾರದು ಎಂದು ಅವರು ಹೇಳಿದರು.